Home latest ತನ್ನ ಹುಟ್ಟುಹಬ್ಬದ ದಿನದಂದೇ ಸಾವು ಕಂಡ ಬಾಲಕಿ| ಅಪಘಾತದ ತೀವ್ರತೆಗೆ ಆರನೇ ತರಗತಿ ಬಾಲಕಿ ಬಲಿ

ತನ್ನ ಹುಟ್ಟುಹಬ್ಬದ ದಿನದಂದೇ ಸಾವು ಕಂಡ ಬಾಲಕಿ| ಅಪಘಾತದ ತೀವ್ರತೆಗೆ ಆರನೇ ತರಗತಿ ಬಾಲಕಿ ಬಲಿ

Hindu neighbor gifts plot of land

Hindu neighbour gifts land to Muslim journalist

ಹನ್ನೊಂದು ವರ್ಷದ ಬಾಲಕಿಯೋರ್ವಳು ತನ್ನ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಬಂಗ್ರಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ ( 11) ಮೃತಪಟ್ಟ ಬಾಲಕಿ.

ಮಂಜೇಶ್ವರಕ್ಕೆ ತನ್ನ‌ ಹುಟ್ಟುಹಬ್ಬದ ಪ್ರಯುಕ್ತ ಸಾಮಾನು ತರಲು ತಂದೆಯೊಂದಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮಂಜೇಶ್ವರ ಒಳರಸ್ತೆಯ ಗಿಳಿವಿಂಡು ಸಮೀಪ ಇವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇಬ್ಬರೂ ಡಿಕ್ಕಿಯಿಂದ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಬಾಲಕಿ ದೀಪಿಕಾಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ತಂದೆ ರವಿಚಂದ್ರ ಗಾಯಗೊಂಡಿದ್ದು, ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.