# ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ !! | ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ ಮಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

- Link: https://hosakannada.com/%e0%b2%95%e0%b3%83%e0%b2%b7%e0%b2%bf/paddy-price/
- Published: 2021-11-15T12:40:54+00:00
- Author: ಹೊಸಕನ್ನಡ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು,ಆಹಾರ ಮತ್ತು ನಾಗರಿಕ
ಪೂರೈಕೆ ಇಲಾಖೆ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿಪಡಿಸಿದೆ.

Sponsored

ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1,940 ರೂ., ಎ ಗ್ರೇಡ್‌ ಭತ್ತಕ್ಕೆ 1,960 ರೂ. ಬೆಲೆ
ನಿಗದಿ ಪಡಿಸಿದ್ದು, ಅದರಂತೆ ಭತ್ತ ಮಾರಾಟ ಮಾಡಲು ಇಚ್ಛಿಸುವ ರೈತರು ನೋಂದಣಿ ಮಾಡಿಕೊಳ್ಳುವಂತೆ ಇಲಾಖೆ
ಸೂಚನೆ ನೀಡಿದೆ.

Advertisement

Advertisement

ಈ ಕುರಿತು ಮಾಹಿತಿ ನೀಡಿರುವ ಸಚಿವ ಉಮೇಶ್ ಕತ್ತಿ, ಕೇಂದ್ರ ಸರ್ಕಾರವು 2021-22ನೇ ಸಾಲಿನ ಮುಂಗಾರು
ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 3.35 ಲಕ್ಷ ಮೆ. ಟನ್‌ ಭತ್ತ ಖರೀದಿಸಲು ಅನುಮತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ
ನೋಂದಣಿ ಆರಂಭಿಸಲು ಸೂಚನೆ ನೀಡಲಾಗಿದ್ದು, ಒಂದು ತಿಂಗಳು ನೋಂದಣಿ ನಡೆಯಲಿದೆ ತಿಳಿಸಿದ್ದಾರೆ.

Advertisement
