Home ದಕ್ಷಿಣ ಕನ್ನಡ Kadaba: ಕಾಂಗ್ರೆಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯಲು ಮುಂದಾದ ಮಹಿಳೆ !! ಅಷ್ಟಕ್ಕೂ ಆಗಿದ್ದೇನು?

Kadaba: ಕಾಂಗ್ರೆಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯಲು ಮುಂದಾದ ಮಹಿಳೆ !! ಅಷ್ಟಕ್ಕೂ ಆಗಿದ್ದೇನು?

Hindu neighbor gifts plot of land

Hindu neighbour gifts land to Muslim journalist

Kadaba: ಕಾಂಗ್ರೆಸ್ ಮುಖಂಡರೊಬ್ಬರಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆಯಲು ಮುಂದಾದಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಹೌದು, ಕಡಬ(Kadaba) ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ವೇಳೆ ತಹಶೀಲ್ದಾರ್ ಪರವಾಗಿ ಮಾತನಾಡಲು ಆಗಮಿಸಿದ ಕಾಂಗ್ರೇಸ್ ಮುಖಂಡನಿಗೆ ಮಹಿಳೆಯೊಬ್ಬರು ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಮುಂದಾದಂತಹ ಘಟನೆ ನಡೆದಿದೆ

ಸರಕಾರಿ ಜಾಗದಲ್ಲಿದ್ದ ವೃದ್ಧ ದಂಪತಿಗಳ ಮನೆ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ನೀತಿ ಟ್ರಸ್ಟ್ ಮತ್ತು ಸಂತ್ರಸ್ತ ಕುಟುಂಬ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದೆ. ವೃದ್ದ ದಂಪತಿ ನಜ್ಜುಗುಜ್ಜುಗೊಂಡ ಪಾತ್ರೆ ಪರಿಕರಗಳ ಜೊತೆ ಆಗಮಿಸಿ ಉರಿ ಬಿಸಿಲಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಾನ ಮನಸ್ಕರು ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಈ ವೇಳೆ ಕಾಂಗ್ರೇಸ್ ಮುಖಂಡ ರಾಯ್ ಅಬ್ರಹಾಂ ಅವರು ಪ್ರತಿಭಟನಾ ನಿರತರೊಂದಿಗೆ ಮಾತಿಗೆ ಮುಂದಾಗಿದ್ದಾರೆ. ಆಗ ಸಿಪಿಐಂ ಮುಖಂಡೆ ಈಶ್ವರಿ ಎಂಬಾಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಈಶ್ವರಿ ಅವರು ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ತಪ್ಪಲಿ ತೆಗೆದಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಕಲ್ಪಿಸಿದ್ದಾರೆ.