Home ದಕ್ಷಿಣ ಕನ್ನಡ “ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆ ” ಮಾಧ್ಯಮಗಳ ಮೇಲೆ ಸಚಿವ ಎಸ್.ಅಂಗಾರ ಆರೋಪ

“ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆ ” ಮಾಧ್ಯಮಗಳ ಮೇಲೆ ಸಚಿವ ಎಸ್.ಅಂಗಾರ ಆರೋಪ

Hindu neighbor gifts plot of land

Hindu neighbour gifts land to Muslim journalist

ಸುಬ್ರಹ್ಮಣ್ಯ: ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ. ಕೆಲವೊಮ್ಮೆ ಆದ ಕೆಲಸವನ್ನೂ ಬಿಟ್ಟು ಬಿಡುತ್ತಾರೆ. ಅದೇ ಮಾದ್ಯಮದವರು, ಇತರರು ವಾಟ್ಸಪ್‌ನಲ್ಲಿ ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆ. ಆದ ಕೆಲಸಗಳ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಮಾಧ್ಯಮಗಳ ಮೇಲೆಯೂ ಆರೋಪಿಸಿ ಹರಿಹಾಯ್ದಿದ್ದಾರೆ.

ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾರೀ ಮಳೆಗೆ ಸಂಭವಿಸಿರುವ ಮಳೆ ಹಾನಿ ಪ್ರದೇಶಗಳಿಗೆ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲ್ಲಿ ಶೀಘ್ರ ಸೇತುವೆ ನಿರ್ಮಾಣ ಮಾಡುವ ಭರವಸೆ ನೀಡಿದರು. ಇಲ್ಲಿನ ಸೇತುವೆ ಸಮಸ್ಯೆಗಳ ಬಗ್ಗೆ ಮಾಧ್ಯಮದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವರದಿ ಪ್ರಕಟವಾಗಿ ಇಲ್ಲಿ ಪರಿಸ್ಥಿತಿ ಪ್ರಕಟಗೊಂಡಿತ್ತು. ಇದೇ ವಿಚಾರದಲ್ಲಿ ಸಚಿವರು ಮಾಧ್ಯಮಗಳು ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆಂಬ ರೀತಿಯಲ್ಲಿ ಮಾಧ್ಯಮಗಳ ಮೇಲೆ ಗೂಭೆ ಕೂರಿಸುವ ಕೆಲಸ ಮಾಡಿದ್ದಾರೆಂಬ ಆರೋಪ ಇದೀಗ ಕೇಳಿ ಬಂದಿದೆ