ಸೋಮವಾರ, 26 ಅಕ್ಟೋಬರ್ 2026
Trending

ಬಂಟ್ವಾಳ: ಅಪರಿಚಿತ ವಾಹನ ಡಿಕ್ಕಿ , ವ್ಯಕ್ತಿ ಸಾವು

Advertisement

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ.

Sponsored

ಮೃತರ ಗುರುತು ಪತ್ತೆಯಾಗಿಲ್ಲ. ತಲಪಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ರಕ್ತಸ್ರಾವವಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅವರನ್ನು ಬಂಟ್ವಾಳ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ.

Advertisement
Advertisement

ಆದರೆ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಈವರೆಗೆ ಸಿಗದೆ ಇರುವುದರಿಂದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸಂಬಂಧಿತ ಕುಟುಂಬವರಿಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮೃತ ವ್ಯಕ್ತಿಗೆ ಅಂದಾಜು 60 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ.‌ ಹೆಚ್ಚಿನ ವಿವರಗಳಿಗೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡಬಹುದು ಎಂದು ಟ್ರಾಫಿಕ್ ಎಸ್. ಐ. ರಾಜೇಶ್ ಕೆ.ವಿ.ತಿಳಿಸಿದ್ದಾರೆ.

Advertisement
div class="ere-sticky">