ಶನಿವಾರ, 24 ಅಕ್ಟೋಬರ್ 2026

ಬೆಳ್ತಂಗಡಿ : ಬೈಕ್ ಹಾಗೂ ಕಾರಿನ ನಡುವೆ ಅಪಘಾತ ; ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಪಡಂಗಡಿ ಪೆರ್ನಮಂಜೆ ತಿರುವಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಇಂದು ಮಧ್ಯಾಹ್ನದ ವೇಳೆ ಭೀಕರ ಅಪಘಾತವೊಂದು ಸಂಭವಿಸಿದೆ.

ಮಾರುತಿ ಕಾರು ಸವಾರ ಬೆಳ್ತಂಗಡಿಯಿಂದ ಮೂಡಬಿದಿರೆ ಮಾರ್ಗವಾಗಿ ಚಲಿಸುತ್ತಿದ್ದು, FZ ಬೈಕ್ ಸವಾರ ವೇಣೂರು ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಮುಖಾಮುಖಿಯಾಗಿ ಈ ಅಪಘಾತ ಸಂಭವಿಸಿದೆ.

ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ತೀವ್ರತೆಗೆ ಬೈಕ್ ಸವಾರನಿಗೆ ಗಂಭೀರ ಪೆಟ್ಟಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ