ಶನಿವಾರ, 24 ಅಕ್ಟೋಬರ್ 2026

ಬೆಳ್ತಂಗಡಿ : ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ನಿಧನ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿಯೋರ್ವರು ಅನಾರೋಗ್ಯದಿಂದ ಮೃತ ಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.

ಮೃತರು ಶ್ರೀಮತಿ ಮಲ್ಲಿಕಾ ( 40 ).

ಮೃತರಿಗೆ ಬುಧವಾರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಲಿಕಾ ಅವರು ಕಳೆದ 7 ವರ್ಷಗಳಿಂದ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೃತರು ಪತಿ, ತಂದೆ- ತಾಯಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ