Home ದಕ್ಷಿಣ ಕನ್ನಡ ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಮೃತ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್ (20) ಎಂದು ಗುರುತಿಸಲಾಗಿದೆ.

ಮುಂಡಾಜೆ ಸಮೀಪದ ಪರಮುಖ ಎಂಬಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಯುವಕ, ತನ್ನ ಸಹೋದರನ ಜೊತೆ ನಿನ್ನೆ ಸಂಜೆ ಸ್ನಾನಕ್ಕೆಂದು ಮನೆ ಸಮೀಪದ ನೇತ್ರಾವತಿ ನದಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದ.

ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡ ರಾತ್ರಿ ತನಕ ಕಾರ್ಯಾಚರಣೆ ನಡೆಸಿ ಹುಡುಕಾಟ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಆದರೆ ಇಂದು ಬೆಳಗ್ಗೆ ಮತ್ತೆ ಹುಡುಕಾಟ ಪ್ರಾರಂಭಿಸಿದಾಗ ಮೃತ ದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.