Home ದಕ್ಷಿಣ ಕನ್ನಡ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬದ ರಾಜೇಶ್

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬದ ರಾಜೇಶ್

Hindu neighbor gifts plot of land

Hindu neighbour gifts land to Muslim journalist

ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಪ್ರಚಾರಕರಾದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಜೇಶ್ ಕುಂತೂರು ಅವರು ಬಿಜೆಪಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.

2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬದವರು.

ವಿದ್ಯಾರ್ಥಿ ಜೀವನದಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಪುತ್ತೂರು ಗ್ರಾಮಾಂತರ ತಾಲೂಕಿನ ಅರಿಯಡ್ಕ ಮಂಡಲದ ಮಂಡಲ ಕಾರ್ಯವಾಹರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಪದವಿ ವಿದ್ಯಾಭ್ಯಾಸ ಮುಗಿಸಿದ ನಂತರ ಸಂಘದ ಪ್ರಚಾರಕರಾಗಿ ತನ್ನ ಪೂರ್ಣ ಜೇವನವನ್ನು ಸಂಘ ಕಾರ್ಯಕ್ಕೆ ಅರ್ಪಿಸಿ ಮೂಡಬಿದ್ರೆ ತಾಲೂಕು ಪ್ರಚಾರಕರಗಿ, ಸಾಗರ ಜಿಲ್ಲಾ ಪ್ರಚಾರಕರಾಗಿ,ಶಿವಮೊಗ್ಗ ಜಿಲ್ಲಾ ಪ್ರಚಾರಕರಾಗಿ,ಮೈಸೂರು ವಿಭಾಗ ಪ್ರಚಾರಕರಾಗಿ ಪ್ರಸ್ತುತ ತುಮಕೂರು ವಿಭಾಗ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಇಂದಿನ ಸಮನ್ವಯ ಬೈಠಕ್ ನಲ್ಲಿ ನೂತನ ಜವಾಬ್ದಾರಿ ಘೋಷಣೆ ಮಾಡಲಾಯಿತು.ಹಿಂದಿನ ಸಂಘಟನಾ ಕಾರ್ಯದರ್ಶಿಯಾಗಿದ್ದ ಶ್ರೀ ಅರುಣ್ ಕುಮಾರ್ ರವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಉತ್ತರ ಹಾಗು ದಕ್ಷಿಣ ಪ್ರಾಂತ್ಯದ ಪ್ರಚಾರ ಪ್ರಮುಖರಾಗಿ ನಿಯುಕ್ತಿಗೊಳಿಸಲಾಗಿದೆ.

32ರ ಹರೆಯದ ರಾಜೇಶ್ ಅವರು ಕಡಬ ತಾಲೂಕಿನ ಕುಂತೂರು ಗ್ರಾಮದ ನೂಜಿಲ ನಿವಾಸಿ ವೀರಪ್ಪ ಹಾಗೂ ದಿ. ಚೆನ್ನಮ್ಮರವರ ಪುತ್ರ.