

Dharmasthal: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ಯೂಟ್ಯೂಬ್ ವಿಡಿಯೋ ಮಾಡಿದ್ದಾರೆ ಎನ್ನಲಾದ ಯೂ ಟ್ಯೂಬರ್ ಸಮೀರ್ ಎಂ ಡಿ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಲಾದ ಕಾಲ್ಪನಿಕ, ಸುಳ್ಳು ಮಾಹಿತಿ ಯನ್ನೊಳಗೊಂಡ ವಿಡಿಯೊವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿ, ಸಾರ್ವಜನಿಕರು ಪ್ರಚೋದನೆ ಗೊಳ್ಳುವಂತೆ ಮಾಡಲಾಗಿದೆ ಎನ್ನಲಾದ ಕಾರಣಕ್ಕಾಗಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನುವ ಬಗ್ಗೆ ಸುದ್ದಿ ಪ್ರಕಟವಾಗಿದೆ.
ಸದ್ರಿ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ಮಾನ್ಯ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ : 42/2025 ಕಲಂ: 192, 240, 353(1)(b) bNS ರಂತೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.













