Home ದಕ್ಷಿಣ ಕನ್ನಡ Puttur: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

Puttur: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

Hindu neighbor gifts plot of land

Hindu neighbour gifts land to Muslim journalist

Puttur: ಇತಿಹಾಸ ಪ್ರಸಿದ್ಧ ಹತ್ತೂರಿನ ಒಡೆಯ ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.

ಈ ಕರಸೇವೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಎಲ್ಲಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅಭಿವೃದ್ಧಿಯ ಕಾಯಕದಲ್ಲಿ ಜೊತೆಯಾಗಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್‌ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್ ರವರು ವಿನಂತಿಸಿರುತ್ತಾರೆ.