Home Karnataka State Politics Updates ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರವೀಣ್ ಮನೆಗೆ ಮುಖ್ಯಮಂತ್ರಿ ಇಂದು ಭೇಟಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರವೀಣ್ ಮನೆಗೆ ಮುಖ್ಯಮಂತ್ರಿ ಇಂದು ಭೇಟಿ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನಪ್ರತಿನಿಧಿಗಳ ಭೇಟಿ ನಂತರ ಈಗ ಮುಖ್ಯಮಂತ್ರಿಗಳ ಆಗಮನವಾಗಲಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಈ ವಿಷಯ ತಿಳಿಸಿದ್ದು, ಮಧ್ಯಾಹ್ನ 3.15ಕ್ಕೆ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ತೆರಳುತ್ತಿದ್ದೇನೆ ಎಂದು ಹೇಳಲಿದ್ದಾರೆ. ಸಿಎಂ ಅವರ ಜೊತೆ ಇನ್ನಿತರ ಪಕ್ಷದ ಮುಖಂಡರು ಆಗಮಿಸಲಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಬುಧವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಮುಖ್ಯಮಂತ್ರಿ ಅವರು , ರಾಜ್ಯ ಬಿಜೆಪಿ ಸರಕಾರದ ಮೂರು ವರ್ಷ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಗುರುವಾರ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮ ನಡೆಸಲು ತಯಾರಿ ನಡೆಸಲಾಗಿತ್ತು, ಆದರೆ ಮಂಗಳವಾರ ರಾತ್ರಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಪೂಜಾರಿ ಅವರನ್ನು ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿತ್ತು ಈ ಹಿನ್ನಲೆಯಲ್ಲಿ ಹಿಂದೂ ಕಾರ್ಯಕರ್ತರು ಸರಕಾರದ ವೈಫಲ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಈ ಎಲ್ಲಾ ವಿದ್ಯಮಾನಗಳನ್ನು ಅವಲೋಕಿಸಿ ಸಿಎಂ ಬೊಮ್ಮಾಯಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅರೋಗ್ಯ ಸಚಿವ ಕೆ. ಸುಧಾಕರ್ ಜೊತೆಗಿದ್ದರು.

ಅಷ್ಟು ಮಾತ್ರವಲ್ಲದೇ, ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ. ಮಾತುಗಳಲ್ಲಲ್ಲ ಮನಸ್ಸಲ್ಲೂ ಆಕ್ರೋಶವಿದೆ. ಹರ್ಷ ಕೊಲೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ಆಗಿರುವುದು ಮನಸಿಗೆ ಘಾಸಿ ಮಾಡಿದೆ ಎಂದು ಸಿಎಂ ಹೇಳಿದ್ದಾರೆ. ಪ್ರವೀಣ್ ತಾಯಿ, ಅವರ ಮನೆಯವರು, ಹರ್ಷನ ತಾಯಿ ಆಕ್ರಂದನ ನೋಡಿ ದೊಡ್ಡಬಳ್ಳಾಪುರದ ಜನೋತ್ಸವ ಕಾರ್ಯಕ್ರಮ ಹಾಗೂ ವಿಧಾನಸೌಧದಲ್ಲಿನ ಕಾರ್ಯಕ್ರಮ ಕೂಡ ರದ್ದು ಮಾಡಿದ್ದೇವೆ. ಜನೋತ್ಸವಕ್ಕೆ ಬಹಳಷ್ಟು ಜನರು ಬರಲಿದ್ದರು. ಅವರಿಗೆ ಆದ ಅನನುಕೂಲಕ್ಕೆ, ಆ ಭಾಗದ ಜನರು, ನಾಯಕರು, ಕಾರ್ಯಕರ್ತರೆಲ್ಲ ಕ್ಷಮೆ ಕೋರುತ್ತೇನೆ ಎಂಬುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೀಗೆ ಮಧ್ಯರಾತ್ರಿಯಲ್ಲಿ ಯಾವ ಮುಖ್ಯಮಂತ್ರಿ ಕೂಡ ಸುದ್ದಿಗೋಷ್ಠಿ ನಡೆಸಿಲ್ಲ. ಹೀಗಾಗಿ ಈ ಸುದ್ದಿಗೋಷ್ಠಿ ಕರೆಯುತ್ತಿದ್ದಂತೆ ರಾಜ್ಯದ ರಾಜಕೀಯ ವಲಯದಲ್ಲಿ, ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಭಾರಿ ಕುತೂಹಲ ಸೃಷ್ಟಿಯಾಗಿತ್ತು.