Home ದಕ್ಷಿಣ ಕನ್ನಡ ದಕ್ಷಿಣ ಕನ್ನಡ : ಮತ್ತೆ ಪುಂಡಾಟ ಮೆರೆದ ಕಾಡಾನೆ ,ಇಲಾಖಾ ನರ್ಸರಿ ಮೇಲೆ ದಾಳಿ ,ಮುಂದುವರಿದ...

ದಕ್ಷಿಣ ಕನ್ನಡ : ಮತ್ತೆ ಪುಂಡಾಟ ಮೆರೆದ ಕಾಡಾನೆ ,ಇಲಾಖಾ ನರ್ಸರಿ ಮೇಲೆ ದಾಳಿ ,ಮುಂದುವರಿದ ಕಾರ್ಯಾಚರಣೆ

Hindu neighbor gifts plot of land

Hindu neighbour gifts land to Muslim journalist

Elephant news: ಮಂಗಳೂರು : ಕಡಬದ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಬಳಿಕ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಿ ಹಂತಕ ಕಾಡಾನೆಯನ್ನು ಸೆರೆ ಹಿಡಿದು ಮತ್ತಿಕೋಡು ಆನೆ ಶಿಬಿರಕ್ಕೆ ಕಳುಹಿಸಲಾಗಿದೆ.

ಏತನ್ಮಧ್ಯೆ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು (Elephant news) ಲಗ್ಗೆ ಇಟ್ಟಿವೆ ಎಂದು ತಿಳಿದುಬಂದಿದ್ದು, ಅಲ್ಲೂ ಪತ್ತೆ ಕಾರ್ಯ ನಡೆಸಲಾಗಿದೆ. ಕಾಡು ಗಿಡಗಳು,ಪೈಪ್ ಸೇರಿದಂತೆ ಸ್ಥಳದಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಿದೆ.

ಕಾಡಾನೆ ಅರಣ್ಯ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ ಕಾರ್ಯ ಮಾಡಿದೆ ಎಂದು ತಿಳಿದುಬಂದಿದೆ.

ಕಾರ್ಯಾಚರಣೆ ಮುಂದುವರಿಕೆ

ಕಡಬ ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯ ಮುಂದುವರಿದಿದೆ. ಆದರೆ ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು.

ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕೊಂದ ಬಳಿಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು, ಮಂಗಳವಾರ ಆರಂಭಗೊಂಡ ಕಾರ್ಯಾಚರಣೆಯಲ್ಲಿ ಗುರುವಾರ ಕೊಂಬಾರು ಬಳಿಯ ಮಂಡೆಕರದಲ್ಲಿ ಕೃತ್ಯ ಎಸಗಿದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಇದರ ಜತೆ ಮುಂಜಾಗ್ರತ ಹಿನ್ನೆಲೆಯಲ್ಲಿ ಅಭಿಮನ್ಯು ಹಾಗೂ ಇನ್ನೊಂದು ಆನೆಯನ್ನೂ ಕರೆದೊಯ್ಯಲಾಗಿದೆ.

ಶುಕ್ರವಾರದ ಕಾರ್ಯಾಚರಣೆಯಲ್ಲಿ ಶಿಬಿರದಲ್ಲಿದ್ದ ಮೂರು ಆನೆಗಳಿಗೆ ವಿರಾಮ ನೀಡಲಾಗಿತ್ತು. ಬೆಳಗ್ಗೆ ಮೂರು ಸಾಕಾನೆಗಳನ್ನು ಪೇರಡ್ಕ ಬಳಿಯ ಶಿಬಿರದಿಂದ ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕಕ್ಕೆ ಕರೆದೊಯ್ದು ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಿಬಂದಿ ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದರು.