Home ದಕ್ಷಿಣ ಕನ್ನಡ D.K: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ; ಬಿಗಿ ಪೊಲೀಸ್‌ ಬಂದೋಬಸ್ತ್‌!!!

D.K: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ; ಬಿಗಿ ಪೊಲೀಸ್‌ ಬಂದೋಬಸ್ತ್‌!!!

Hindu neighbor gifts plot of land

Hindu neighbour gifts land to Muslim journalist

Dakshina Kannada: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಸಮಾರಂಭದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಮಂಗಳೂರು ನಗರದಲ್ಲಿ ದೇವಸ್ಥಾನ, ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಸುವ ಸ್ಥಳಗಳನ್ನು ಗುರುತಿಸಲಾಗಿದೆ. 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್‌ ನೇಮಿಸಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಜನವರಿ 21ರ ಮಧ್ಯರಾತ್ರಿಯಿಂದ ಜನವರಿ 23ರ ಮುಂಜಾನೆಯ ವರೆಗೆ ಎಲ್ಲಾ ರೀತಿಯ ಬಾರ್‌ಗಳು ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ನಗರದಲ್ಲಿ 57 ಸೆಕ್ಟರ್‌ ಮೊಬೈಲ್‌ಗಳನ್ನು 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ. 14 ಸ್ಥಳಗಳಲ್ಲಿ ಚೆಕ್‌ಪಾಯಿಂಟ್‌ ಗಳನ್ನು ನಿಯೋಜನೆ ಮಾಡಲಾಗಿದೆ. 9 ಸಿ.ಎ.ಆರ್‌ ಮತ್ತು 3 ಕೆ.ಎಸ್‌.ಆರ್.ಪಿ ತುಕಡಿಗಳನ್ನು ನಿಯೋಜನೆ ಮಾಡಿರುವುದಾಗಿ ವರದಿಯಾಗಿದೆ.