# ಮಂಗಳೂರು : ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/fire-at-scrap-shop-mangalore/
- Published: 2022-04-02T16:30:28+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು: ನಗರದ ಬೊಕ್ಕಪಟ್ಣ ಬಳಿಯ ಮಠದಕಣಿ ಬಳಿ ಗುಜರಿ ಅಂಗಡಿಯೊಂದರಲ್ಲಿ ಇಂದು ಮಧ್ಯಾಹ್ನ ಬೆಂಕಿ
ಅವಘಡ ಸಂಭವಿಸಿದೆ.

Sponsored

ಇಮ್ರಾನ್ ಮಠದ ಕಣಿ ಎಂಬವರಿಗೆ ಸೇರಿದ ಗುಜರಿ ಅಂಗಡಿ ಇದಾಗಿದ್ದು, ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.

ಈ ಘಟನೆ ಸಂಭವಿಸಿದಾಗ ಅಂಗಡಿಯಲ್ಲಿ ಯಾರು ಇರಲಿಲ್ಲ ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬ
ಮಾಹಿತಿ ಲಭ್ಯವಾಗಿದೆ.

Advertisement

Advertisement

![](https://hosakannada.com/wp-content/uploads/2022/04/IMG_20220402_162828.jpg)

ಬೆಂಕಿಯ ಕೆನ್ನಾಲಗೆ ಪರಿಸುತ್ತಿದ್ದಂತೆ ಸ್ಥಳೀಯರು ನೀರು ಸಿಂಪಡಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.

ಜೊತೆಗೆ ಅಗ್ನಿಶಾಮಕ ದಳದ ಅಧಿಕಾರಿ ರಾಜ ಅವರ ತಂಡವೂ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದೆ.

Advertisement
