Home ದಕ್ಷಿಣ ಕನ್ನಡ Mangaluru: ಮಂಗಳೂರಲ್ಲಿ ಬಾಲಕಿ ಗ್ಯಾಂಗ್‌ರೇಪ್: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಮಂಗಳೂರಲ್ಲಿ ಬಾಲಕಿ ಗ್ಯಾಂಗ್‌ರೇಪ್: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Hindu neighbor gifts plot of land

Hindu neighbour gifts land to Muslim journalist

Mangaluru: ಮಂಗಳೂರು (Mangaluru) ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಯನ್ನು 2021ರ ನವೆಂಬರ್ 21ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು.

ಇದೀಗ ಈ ಬಾಲಕಿ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಲ್ಲಿ ಮೂವರು ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ನವೆಂಬರ್ 21 ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಆರೋಪಿಗಳು ಸೇರಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಯಲ್ಲಿ ಬಾಲಕಿ ಮೃತದೇಹ ಎಸೆದಿದ್ದರು. ಆದ್ರೆ ಮೂವರು ಆರೋಪಿಗಳೂ ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಾಗಿತ್ತು. ಇನ್ನು ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.