ಶನಿವಾರ, 24 ಅಕ್ಟೋಬರ್ 2026

School Holiday: ನಿಲ್ಲದ ಮಳೆ; ನಾಳೆ ( ಜುಲೈ 20) ಪಿಯುಸಿವರೆಗೆ ದ.ಕ, ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ

School Holiday: ವರುಣರಾಯ ಅಬ್ಬರಿಸಿ ಬೋರ್ಗೆರಯುತ್ತಿದ್ದು, ಈ ಕಾರಣದಿಂದ ಶನಿವಾರ (ಜುಲೈ 20) ರಂದು ದ.ಕ, ಉಡುಪಿ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

School Holiday

School Holiday: ವರುಣರಾಯ ಅಬ್ಬರಿಸಿ ಬೋರ್ಗೆರಯುತ್ತಿದ್ದು, ಈ ಕಾರಣದಿಂದ ಶನಿವಾರ (ಜುಲೈ 20) ರಂದು ದ.ಕ, ಉಡುಪಿ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ದಿನಾಂಕ 20-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.

ರೆಡ್‌ ಅಲರ್ಟ್‌ ಮತ್ತು ಭಾರೀ ಮಳೆ ಇನ್ನೂ ಸುರಿಯುತ್ತಿರುವ ಕಾರಣ ಶುಕ್ರವಾರ ಕೂಡಾ ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ನೀಡಲಾಗಿತ್ತು. ಮಳೆ ಇಂದು ಕೂಡಾ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ನಾಳೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ