# ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ| ನಾಲ್ವರ‌ ಬಂಧನ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/hitech-prostitition/
- Published: 2022-03-08T20:57:28+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ
ಹೈಟೆಲ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು
ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

Sponsored

ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ‌ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು‌
ಮಂಗಳೂರು ‌ಪೊಲೀಸರು‌ ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಫೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Advertisement

Advertisement

ನಾಲ್ವರು ಆರೋಪಿಗಳನ್ನು ಪೊಲೀಸರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬಂಧಿಸಿದ್ದಾರೆ.
ರಶೀದ್‌ ಸಾಹೇಬ್ ( 73), ಮೊಹಮ್ಮದ್ ಆಲಿ ( 74), ಗ್ರೆಗರಿ ಲಿಯೋನಾರ್ಡ್‌ ಸಿಕ್ವೇರಾ ( 62) ಹಾಗೂ
ಇಸ್ಮಾಯಿಲ್ ( 41) ಬಂಧಿತರು.

ಗ್ರಾಹಕರ ರೀತಿಯಲ್ಲಿ ಬಂದು ಈ ನಾಲ್ವರು ಆರೋಪಿಗಳು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಂಗಳೂರಿನ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
