ಸೋಮವಾರ, 26 ಅಕ್ಟೋಬರ್ 2026
Trending

ಕಡಬ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು -ಐವರಿಗೆ ಗಂಭೀರ ಗಾಯ!

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ.

Sponsored

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.