Home ದಕ್ಷಿಣ ಕನ್ನಡ ಕಡಬ:ಮಾರಕ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಆಲಂಕಾರು ಪ್ರೌಢ ಶಾಲಾ ವಿದ್ಯಾರ್ಥಿನಿ ಸಾವು

ಕಡಬ:ಮಾರಕ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಆಲಂಕಾರು ಪ್ರೌಢ ಶಾಲಾ ವಿದ್ಯಾರ್ಥಿನಿ ಸಾವು

Hindu neighbor gifts plot of land

Hindu neighbour gifts land to Muslim journalist

ಕಡಬ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರೌಢ ಶಾಲಾ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಬಾಲಕಿಯನ್ನು ಕಡಬ ತಾಲೂಕಿನ ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ(14) ಎಂದು ಗುರುತಿಸಲಾಗಿದೆ.

ಮೃತ ಬಾಲಕಿ ಆಲಂಕಾರು ದುರ್ಗಾಂಬಾ ಪ್ರೌಢ ಶಾಲಾ 09 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಫೆ.24 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಮೃತಪಟ್ಟ ಗೌರವಾರ್ಥ ಪ್ರೌಢ ಶಾಲೆಗೆ ಒಂದು ದಿನದ ರಜೆ ನೀಡಲಾಗಿದ್ದು, ಮೃತರು ತಂದೆ ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.