Home ದಕ್ಷಿಣ ಕನ್ನಡ ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

Hindu neighbor gifts plot of land

Hindu neighbour gifts land to Muslim journalist


ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು. ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ ಚಿನ್ನದ ಉಂಗುರದ ಸನ್ಮಾನ ಸ್ವೀಕರಿಸಿದ್ದಾರೆ.
ಕರ್ನಾಟಕ ಮೇಳ ಒಂದರಲ್ಲೇ 35 ವರುಷಗಳ ತಿರುಗಾಟ ಮಾಡಿದ್ದಾರೆ.
ಉಳಿದಂತೆ ಮಧೂರು ಮೇಳ 1 ವರುಷ ಸುರತ್ಕಲ್ ಮೇಳ 5 ವರುಷ. ಕದ್ರಿ ಮೇಳ 2 ವರುಷ. ಬಪ್ಪನಾಡು 1 ವರುಷ. ಕುಂಟಾರು ಮೇಳ 2 ವರುಷ. ಎಡನೀರು 1 ವರುಷ ಕಟೀಲು ಮೇಳ 3 ವರುಷ ತಿರುಗಾಟ ಮಾಡಿದ್ದಾರೆ.
ಇವರು ಅಲ್ಪ ಕಾಲದ ಅನಾರೋಗ್ಯದಿಂದ ಕಳೆದ ರಾತ್ರಿ ಬೆಳ್ಳಾರೆಯ ಸ್ವಗ್ರಹದಲ್ಲಿ ಇಹಲೋಕ ತ್ಯಜಿಸಿದರು ಇಂದು ಮದ್ಯಾಹ್ನ ಅವರ ಪಾರ್ಥಿವ ಶರೀರದ ಅಂತ್ಯ ಕ್ರಿಯೆ ಬೆಳ್ಳಾರೆಯಲ್ಲಿ ಜರಗಲಿದೆ.