

ಆರೆಸ್ಸೆಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೃದಯದ ಬೈಪಾಸ್ ಸರ್ಜರಿಯಿಂದ ಚೇತರಿಸಿಕೊಂಡು ಸೋಮವಾರ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ಕಳೆದ ಐದಾರು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಲ್ಲಡ್ಕ ಭಟ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು.
ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮನೆಯಲ್ಲಿ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ ಕಾರಣದಿಂದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ನಡುವೆ ಭಟ್ ಅವರು ಕಲ್ಲಡ್ಕ ಶಾಲೆಯ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಬಳಿಕ ಬೈಪಾಸ್ ಸರ್ಜರಿಗೆ ಒಳಗಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.













