ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
Sponsoredಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಪ್ರಭಾಕರ್ ಭಟ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಈಗಾಗಲೇ ಸೂಚಿಸಿದ್ದಾರೆ ಎಂಬ ಮಾಹಿತಿ ಇದೆ. ಮೂಲಗಳ ಪ್ರಕಾರ, ಮಂಗಳೂರಿನಲ್ಲೇ ಶಸ್ತ್ರಚಿತ್ಸೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.
Marriage AdSponsoredಏ.11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೈಪಾಸ್ ಸರ್ಜರಿ ನಡೆಸುವ ಸಂಭವ ಇದೆ. ಪ್ರಸಕ್ತ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿ ಇರುವುದರಿಂದ ಅವರ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.




