ಶನಿವಾರ, 24 ಅಕ್ಟೋಬರ್ 2026

ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಂದ ಮಹಿಳೆಯ ಮಾನಭಂಗ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಕಡಬ :ಕಾಣಿಯೂರಿನಲ್ಲಿಬೆಡ್‌ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದು ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅ. 20ರಂದು ಬೆಡ್‌ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದಿದ್ದ ಮಂಗಳೂರು ಅತ್ತೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ಆತನ ಸಂಬಂಧಿಕ ಮಹಮ್ಮದ್ ರಫೀಕ್ ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದಾಗಿ ಆರೋಪಿಸಲಾಗಿತ್ತು.

ಘಟನೆ ಕುರಿತು ಮಹಿಳೆ ನೀಡಿದ್ದ ದೂರಿನ ಮೇರೆಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ