ಶನಿವಾರ, 24 ಅಕ್ಟೋಬರ್ 2026

ಕಡಬ : ಕೋಡಿಂಬಾಳದಲ್ಲಿ ಬಸ್-ಕಾರು ನಡುವೆ ಅಪಘಾತ

ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ