Home ದಕ್ಷಿಣ ಕನ್ನಡ ನ.18 : ಕೊಂಬಾರಿನಲ್ಲಿ ಪತ್ರಕರ್ತರ ಸಂಘದಿಂದ ಪುಸ್ತಕ ವಿತರಣೆ

ನ.18 : ಕೊಂಬಾರಿನಲ್ಲಿ ಪತ್ರಕರ್ತರ ಸಂಘದಿಂದ ಪುಸ್ತಕ ವಿತರಣೆ

Hindu neighbor gifts plot of land

Hindu neighbour gifts land to Muslim journalist

ಕಡಬ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18 ರಂದು ಗುರುವಾರ ಕೊಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೊಂಬಾರು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಿಲಿಕಜೆ-ಗುಂಡ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗೇರಡ್ಕ, ಸಿರಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಲಾಗುವುದು. ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕೆಐಒಸಿಎಲ್ ಸಂಸ್ಥೆ ಯ ಜನರಲ್ ಮ್ಯಾನೇಜರ್ ರಾಮಕೃಷ್ಣ, ಸೀನಿಯರ್ ಮ್ಯಾನೇಜರ್ ಮುರುಗೇಶ್, ಕಡಬ ತಹಶೀಲ್ದಾರ್ ಅನಂತ ಶಂಕರ್ ಬಿ, ಕಡಬ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.