Home ದಕ್ಷಿಣ ಕನ್ನಡ ಮಂಗಳೂರು : ಮಳಲಿ ಮಸೀದಿ ಪ್ರಕರಣ | ವಿಶ್ವ ಹಿಂದೂ ಪರಿಷತ್ ಗೆ ಮೊದಲ ಜಯ

ಮಂಗಳೂರು : ಮಳಲಿ ಮಸೀದಿ ಪ್ರಕರಣ | ವಿಶ್ವ ಹಿಂದೂ ಪರಿಷತ್ ಗೆ ಮೊದಲ ಜಯ

Hindu neighbor gifts plot of land

Hindu neighbour gifts land to Muslim journalist

ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಇಂದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದೆ.

ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ ಬುಧವಾರ ( ನ.9 ರಂದು) ನ್ಯಾಯಾಲಯ ತೀರ್ಪು ನೀಡಿದೆ.

ಮಸೀದಿ ವಿಚಾರ ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದೆಂಬ ಮಸೀದಿ ಪರ ವಕೀಲರ ವಾದವನ್ನು ವಾದಿಸಿದ್ದರು. ಈ ವಾದವನ್ನು ಆಲಿಸಿದ ಬಳಿಕ ಕೋರ್ಟ್‌ ಮಸೀದಿ ಆಡಳಿತದ ಅರ್ಜಿಯನ್ನು ತಿರಸ್ಕರಿಸಿ ಮಳಲಿ ಮಸೀದಿ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ತೀರ್ಪು ನೀಡಿದೆ.

ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಎಚ್ ಪಿಯ ಅರ್ಜಿಯನ್ನು ಕೋರ್ಟ್‌ ಸ್ವೀಕರಿಸಿ,ಮುಂದಿನ ವಿಚಾರಣೆ ಜ.8 (2023) ರಂದು ನಿಗದಿಯಾಗಿದೆ.

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅನದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕಡವಿದ ಸಂದರ್ಭದಲ್ಲಿ, ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡವೊಂದು ಪತ್ತೆಯಾಗಿತ್ತು. ಹಾಗಾಗಿ ಹಿಂದುತ್ವ ಪರ ಸಂಘಟನೆಗಳು ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಅದೇಶ ಮಾಡಬೇಕು ಎಂದು ಮನವಿ ಮಾಡಿದ್ದವು.

ಇದನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಲಯಕ್ಕೆ ಇಲ್ಲ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದ ಅಧಿಸೂಚನೆ ಇರಬೇಕು. ಆದರೆ ಮಳಲಿ ಮಸೀದಿಯ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರಲಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್‌ಗೆ ಅಧಿಕಾರ ಇಲ್ಲ ಎಂದು ವಾದ ಮಂಡಿಸಿತ್ತು.