Home Crime Mangalore: ರಾತ್ರೋರಾತ್ರಿ ಪಿಲಿಚಾಮಂಡಿ ದೈವದ ಗುಡಿ ಧ್ವಂಸ ಮಾಡಿದ ಕಿಡಿಗೇಡಿಗಳು !!

Mangalore: ರಾತ್ರೋರಾತ್ರಿ ಪಿಲಿಚಾಮಂಡಿ ದೈವದ ಗುಡಿ ಧ್ವಂಸ ಮಾಡಿದ ಕಿಡಿಗೇಡಿಗಳು !!

Manglore

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ತುಳುನಾಡಿನ ಪುರಾಣ ಪ್ರಸಿದ್ಧ ಚ್ಷೇತ್ರವಾದ ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನದ (Pilichamundi Daivasthana) ನಿರ್ಮಾಣ ಹಂತದ ಕಟ್ಟಡವನ್ನು ಕಿಡಿಕೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸ ಮಾಡಿದ್ದಾರೆ.

ಹೌದು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ (Muzrai Department) ಸೇರುವ ಕೊಂಡಾಣ ದೈವಸ್ಥಾನ, ಸದ್ಯ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಭಂಡಾರಮನೆ ಖಾಸಗಿ ಗುತ್ತಿನ ಮನೆ ಒಡೆತನದಲ್ಲಿರುವ ದೈವಸ್ಥಾನದ ನೂತನ ಭಂಡಾರಮನೆ ಎರಡು ಬಣಗಳ ಸಂಘರ್ಷದಿಂದಾಗಿ ಕಿಡಿಗೇಡಿಗಳ ಕೃತ್ಯಕ್ಕೆ ಸಂಪೂರ್ಣ ಧ್ವಂಸವಾಗಿದೆ. ದೈವಸ್ಥಾನದ ಆಡಳಿತ ಮಂಡಳಿ ವಿವಾದದ ಸಂಘರ್ಷದಲ್ಲಿ ಕಟ್ಟಡ ಧ್ವಂಸವಾಗಿದೆ ಎಂದು ಹೇಳಿದ್ದಾರೆ.

ಹೀಗಾಗಿ ನೂರಾರು ವರ್ಷಗಳಿಂದ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಇರುವ ಒಡವೆಗಳು, ಕಾರ್ಣಿಕ ದೈವದ ಕೋಟ್ಯಂತರ ರೂ. ಒಡವೆಗಳ ಅಧಿಪತ್ಯಕ್ಕಾಗಿ ಸಂಘರ್ಷ ಶುರುವಾಗಿದೆ. ದೈವಗಳ ಸಮ್ಮುಖದಲ್ಲಿ ಬಗೆಹರಿಯಬೇಕಾದ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಏನಿದು ಪ್ರಕರಣ?

ಅಂದಹಾಗೆ ಭಂಡಾರ ಮನೆಯಲ್ಲಿ ಕ್ಷೇತ್ರದ ದೈವಗಳ 15 ಕೋಟಿ ರೂ. ಮೌಲ್ಯಕ್ಕೂ ಮೀರಿದ ಬೆಲೆಬಾಳುವ ಒಡವೆಗಳಿವೆ. ಭಂಡಾರಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಯತ್ನಿಸುತ್ತಿದ್ದು ಇದಕ್ಕೆ ಖಾಸಗಿ ಭಂಡಾರಮನೆಯವರು ಸಮ್ಮತಿ ನೀಡಿರಲಿಲ್ಲ. ಈ ಹಿನ್ನಲೆ ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣಕ್ಕೆ ವ್ಯವಸ್ಥಾಪನಾ ಸಮಿತಿ ಮುಂದಾಗಿದ್ದು ದೈವಸ್ಥಾನದ ಪಕ್ಕದ ಜಾಗದಲ್ಲಿ ಕಳೆದ ಜ.8 ರಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ನೇತೃತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲನ್ಯಾಸ ಮಾಡಲಾಗಿತ್ತು.

ಬಳಿಕ ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ 80% ಕಾಮಗಾರಿ ಪೂರ್ಣಗೊಂಡಿತ್ತು. ಇದರ ನಡುವೆ ಈಗಿನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಅವಧಿ ಮುಗಿದ ಹಿನ್ನೆಲೆ, ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಎರಡು ದಿನಗಳ ಹಿಂದಷ್ಟೇ ಅಧಿಕಾರವನ್ನು ಇಲಾಖೆಗೆ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆ ನೆಲಸಮ ಮಾಡಿದ್ದಾರೆ.