Home ದಕ್ಷಿಣ ಕನ್ನಡ ಮಂಗಳೂರು:ಗಾಂಜಾ ಮಾರಾಟದ ಆರೋಪ!! ಖಾಸಗಿ ಕಾಲೇಜಿನ 12 ವಿದ್ಯಾರ್ಥಿಗಳ ಬಂಧನ

ಮಂಗಳೂರು:ಗಾಂಜಾ ಮಾರಾಟದ ಆರೋಪ!! ಖಾಸಗಿ ಕಾಲೇಜಿನ 12 ವಿದ್ಯಾರ್ಥಿಗಳ ಬಂಧನ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ನಗರದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ್ದ 12 ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸ್ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಕೇರಳ ಮೂಲದ ಶಾನುಫ್ ಅಬ್ದುಲ್ ಗಾಪುರ್ (21) ಮಹಮ್ಮದ್ ರಸಿನ್ (22) ಗೋಕುಲ ಕೃಷ್ಣನ್ (22), ಶರೂನ್ ಆನಂದ (19) ಅನಂತು ಕೆಪಿ(18), ಅಮಲ್ (21) ಅಭಿಷೇಕ್ (21) ನಿದಲ್ (21),ಶಾಹಿದ್ ಎಂಟಿಪಿ (22) ಪಹಾದ್ ಗಬೀಬ್ (22) ಮಹಮ್ಮದ್ ರಿಶಿನ್ (22), ರಿಜಿನ್ ರಿಯಾಜ್ (22).

ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ರಾಜೇಂದ್ರ ಬಿ ಮತ್ತು ಅವರ ತಂಡ ವೆಲೆನ್ಸಿಯಾದ ಸೂಟರ್‌ಪೇಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 900 ಗ್ರಾಂ ತೂಕದ 20,000 ರೂ. ಮೌಲ್ಯದ ಗಾಂಜಾ ಸಹಿತ ಒಟ್ಟು 2.85 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲಾ 12 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 11 ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ.

ವಿದ್ಯಾರ್ಥಿಗಳು ನಗರದ ವಿವಿಧ ಖಾಸಗಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿದ್ದು , ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.