Home ದಕ್ಷಿಣ ಕನ್ನಡ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಮಂಗಳೂರಿನಲ್ಲಿ ಹೈ ಅಲರ್ಟ್

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಮಂಗಳೂರಿನಲ್ಲಿ ಹೈ ಅಲರ್ಟ್

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಬಜರಂಗದಳದ ಕಾರ್ಯಕರ್ತನ ಹತ್ಯೆ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಎಲ್ಲಾ‌ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಬಳ್ಳಾಲ್ ಬಾಗ್ ವೃತ್ತ, ಎಂ ಜಿ ರೋಡ್, ಕೆ ಎಸ್ ರಾವ್ ರೋಡ್, ಹಂಪನಕಟ್ಟೆ ಪ್ರದೇಶದಲ್ಲಿ ಪೊಲೀಸರ ರೂಟ್ ಮಾರ್ಚ್ ನಡೆಯಿತು.

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.