Home ದಕ್ಷಿಣ ಕನ್ನಡ ಮಂಗಳೂರು : ಹುಲಿ ವೇಷಧಾರಿಯ ಕೊಲೆ ,ಆರೋಪಿ ಬಂಧನ

ಮಂಗಳೂರು : ಹುಲಿ ವೇಷಧಾರಿಯ ಕೊಲೆ ,ಆರೋಪಿ ಬಂಧನ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ಹುಲಿವೇಷಧಾರಿ ಜಯಾನಂದ ಆಚಾರ್ಯ (65) ಎಂಬವರನ್ನು ಯುವಕನೋರ್ವ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಲೆ ಆರೋಪಿ ಕುಂಜತ್‌ಬೈಲ್ ದೇವಿನಗರದ ರಾಜೇಶ್ ಪೂಜಾರಿ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹುಲಿವೇಷಧಾರಿಯಾಗಿದ್ದ ಜಯಾನಂದ ಆಚಾರ್ಯರ ಮೃತದೇಹ ಕುತ್ತಿಗೆಗೆ ದಾರ ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿತ್ತು. ಈ ಬಗ್ಗೆ ಜಯಾನಂದರ ಸಹೋದರ ಅಚ್ಚುತ ಆಚಾರ್ಯ ಎಂಬವರು ಕೊಲೆ ಶಂಕೆ ವ್ಯಕ್ತಪಡಿಸಿ ಕಾವೂರು ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿದ ಕಾವೂರು ಪೊಲೀಸರು ತನಿಖೆ ನಡೆಸಿದಾಗ ಆರೋಪಿ ರಾಜೇಶ್ ಪೂಜಾರಿ ಕೊಲೆ ನಡೆಸಿರುವುದಾಗಿ ತಿಳಿದುಬಂದಿದ್ದು, ಅದರಂತೆ ಆತನನ್ನು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.