Home ದಕ್ಷಿಣ ಕನ್ನಡ Dakshina Kannada: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ಅಪಘಾತ – ಕೇಸ್ ಆಗುತ್ತೆ ಎಂದು...

Dakshina Kannada: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ಅಪಘಾತ – ಕೇಸ್ ಆಗುತ್ತೆ ಎಂದು ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

Dakshina Kannada ಜಿಲ್ಲೆಯ ಸುರತ್ಕಲ್ ನಲ್ಲಿ ಕಳೆದ ಡಿಸೆಂಬರ್11ರಂದು ವಿದ್ಯಾರ್ಥಿಯವರು ದ್ವಿಚಕ್ರ ವಾಹನ ಚಲಾಯಿಸುತ್ತಾ ಅಪಘಾತಕ್ಕೀಡಾಗಿದ್ದ. ಆದರೆ ಆ ವಿದ್ಯಾರ್ಥಿ ಬಳಿ ಲೈಸೆನ್ಸ್ ಇರಲಿಲ್ಲ. ದುರಂತವೆಂದರೆ ಇದೀಗ ಆ ವಿದ್ಯಾರ್ಥಿ ತನ್ನ ಮೇಲೆ ಕೇಸ್ ಆಗಬಹುದು ಎಂದು ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಹೌದು, ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಧನುಷ್ ಡಿಸೆಂಬರ್11ರಂದು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಅಪಘಾತ ನಡೆಸಿದ್ದ. ಆತನಿಗೆ ವಾಹನ ಚಾಲನಾ ಪರವಾನಗಿ ಇರಲಿಲ್ಲ. ಅಪಘಾತ ನಡೆದ ಮತ್ತೊಂದು ದ್ವಿಚಕ್ರ ವಾಹನ ಸವಾರನೊಂದಿಗೆ ಮಾತುಕತೆ ನಡೆದು ಆತನಿಗೆ ಹಣ ನೀಡಲು ವ್ಯವಸ್ಥೆಯಾಗದ ಕಾರಣ ಹಾಗೂ ಇದರಿಂದ ಕೇಸ್ ಆದರೆ ತೊಂದರೆಯಾಗುತ್ತದೆ ಎಂದು ಹೆದರಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.