ಭಾನುವಾರ, 25 ಅಕ್ಟೋಬರ್ 2026

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಾಲೇಜ್ ಹಾಸ್ಟೆಲ್‌ನಲ್ಲಿಯೇ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

Sponsored

ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಡ್ರಾ ಪಿ.ಪಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

Marriage AdMarriage AdSponsored

ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ, ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರ ಮಧ್ಯೆ ಕಾಲೇಜಿಗೆ ಸೇರಿದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಒಂದು ವರ್ಷದಿಂದ ಸಾಂಡ್ರಾ ಖಿನ್ನತೆಗೆ ಒಳಗಾಗಿದ್ದಳು. ಅಲ್ಲದೇ ಈ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಳೆಂದು ತಿಳಿದು ಬಂದಿದೆ. ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.