Home ದಕ್ಷಿಣ ಕನ್ನಡ ಮಂಗಳೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Hindu neighbor gifts plot of land

Hindu neighbour gifts land to Muslim journalist

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಮಂಗಳೂರಿನ ಶಕ್ತಿನಗರದ ಅಂಚೆ ಕಚೇರಿ ಬಳಿ ಪತ್ತೆಯಾಗಿದೆ.

ಶಕ್ತಿನಗರದ ಪ್ರಶಾಂತಿನಗರದ ನಿವಾಸಿ ಸದಾನಂದ (31) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಸದಾನಂದ ಅವರು ಒಂದು ವಾರದಿಂದ ನಾಪತ್ತೆಯಾಗಿದ್ದು, ಮದ್ಯ ಸೇವನೆ ಚಟ ಹೊಂದಿದ್ದರಿಂದ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಕಾರಣ ಮನೆಯವರು ಪೊಲೀಸ್ ದೂರು ನೀಡಿರಲಿಲ್ಲ.

ಆದರೆ ಸ್ಥಳೀಯರಿಗೆ ಕಳೆದ ಎರಡು ದಿನಗಳಿಂದ ಅಂಚೆ ಕಚೇರಿ ಪರಿಸರದಲ್ಲಿ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಆ ಜಾಗದಲ್ಲಿ ಹೋಗಿ ನೋಡಿದಾಗ ಕೊಳೆದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಸ್ಥಳದಲ್ಲಿ ಕಾಡು ಬೆಳೆದಿದ್ದ ಕಾರಣ ತಕ್ಷಣ ಯಾರ ಗಮನಕ್ಕೂ ಬಂದಿರಲಿಲ್ಲ. ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಮನೆಯವರು ಸ್ಥಳಕ್ಕೆ ಆಗಮಿಸಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಮೃತದೇಹವನ್ನು ಬಳಿಕ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿ ಮನೆಯವರಿಗೆ ಹಸ್ತಾಂತರಿಸಲಾಗಿದೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.