Home ದಕ್ಷಿಣ ಕನ್ನಡ ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ; ನಿಯಮ ಮೀರಿದರೆ ಜೈಲು ಶಿಕ್ಷೆ ಫಿಕ್ಸ್

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ; ನಿಯಮ ಮೀರಿದರೆ ಜೈಲು ಶಿಕ್ಷೆ ಫಿಕ್ಸ್

Hindu neighbor gifts plot of land

Hindu neighbour gifts land to Muslim journalist

ಧ್ವಜ ಹಾರಾಟಕ್ಕೆ ಕೆಲವೊಂದು ಧ್ವಜಸಂಹಿತೆಯನ್ನು ಜಾರಿಗೊಳಿಸಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ.ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ‘ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಧ್ವಜ ಹಾರಿಸುವುದಕ್ಕೆ ತೊಂದರೆ ಇಲ್ಲ. ಆದರೆ ನಿಯಮವನ್ನು ಮೀರಿದರೆ ಮಾತ್ರ ಜೈಲುಶಿಕ್ಷೆ ಅಷ್ಟೇ ಅಲ್ಲದೆ ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ. ಇದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶವಿದೆ.

ನಿಯಮ ಪಾಲಿಸದಿದ್ದರೆ, ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು’ ಎಂದು ಹೇಳಿದರು. ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ.

ಜಿಲ್ಲೆಯ ಎಲ್ಲ ಶಾಲೆ, ಕಾಲೇಜು, ಸರಕಾರಿ ಕಟ್ಟಡ, ಅಂಗನವಾಡಿ, ಪಂಚಾಯತ ಕಟ್ಟಡಗಳಲ್ಲಿ ದಿ: 13-08-2022 ರಿಂದ 15-08-2022 ರವರೆಗೆ ಪ್ರತೀ ದಿನ ಬೆಳಿಗೆ 8.00 ಗಂಟೆಗೆ ಧ್ವಜಾರೋಹನ ಮಾಡುವುದು, ಸಾಯಂಕಾಲ ಸೂರ್ಯಾಸ್ತಕ್ಕೆ ಇಳಿಸುವುದು. ಹಾಗೂ ಜಿಲ್ಲಾದ್ಯಂತ ಎಲ್ಲ ಮನಗಳ ಮೇಲೆ ದಿ: 13.08.2022 ರಂದು ಬೆಳಿಗ್ಗೆ 8.00 ಗಂಟೆಯಿಂದ, ದಿ: 15.08.2022 ರ ಸೂರ್ಯಾಸ್ತದವರೆಗೆ ಹಗಲು ರಾತ್ರಿ ನಿರಂತರವಾಗಿ ಧ್ವಜಾರೋಹಣ ಮಾಡಬಹುದು. ದಿ: 15-08-2022 ರಂದು ಸಾಯಂಕಾಲ ಸೂರ್ಯಾಸ್ತಕ್ಕೆ ಇಳಿಸbeku. ಈ ರೀತಿಯಾಗಿ ಎಲ್ಲರೂ ಕಟ್ಟುನಿಟ್ಟಾಗಿ ಈ ಸೂಚನೆಯನ್ನು ಪಾಲನೆ ಮಾಡಿ “ಹರ ಘರ ತಿರಂಗಾ” ಅಭಿಯಾನವನ್ನು ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ತಿಳಿಸಲಾಗಿದೆ.