

ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಹಿಂದೂ ಸಂಘಟನೆಗಳ ಆರೋಪದ ಮೇರೆಗೆ ಪೊಲೀಸರು ದಾಳಿ ಮಾಡಿರುವ ಘಟನೆ ಜೂ.4ರ ಮಧ್ಯ ರಾತ್ರಿ ನಡೆದಿದೆ.
ನೆಲ್ಯಾಡಿಯ ಆರ್ಲದ ಧ್ಯಾನ ಮಂದಿರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಸುಮಾರು 40ಕ್ಕೂ ಹೆಚ್ಚು ಜನರು ಪ್ರಾರ್ಥನಾ ಮಂದಿರದಲ್ಲಿ ಇರುವುದು ಮೆಲ್ನೋಟಕ್ಕೆ ಕಂಡು ಬಂದಿದೆ.
ಅನಧಿಕೃತ ಕಟ್ಟಡದಲ್ಲಿ ಜನರನ್ನು ಒಟ್ಟುಸೇರಿಸಿದ್ದರು ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.ಹಿಂದೂ ಸಂಘಟನೆಯ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಮಂತಾಂತರದ ಶಂಕೆ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ಕಾನೂನು ಬಾಹಿರ ಚಟುವಟಿಕೆಯನ್ನು ನಿಯಂತ್ರಿಸಿ ಭಾಗಿಯಾದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು ಮತ್ತೆ ಪುನಾರವರ್ತನೆಯಾದಲ್ಲಿ ಹೋರಾಟದ ಎಚ್ಚರಿಕೆಯನ್ನೂ ಮುರಳೀಕೃಷ್ಣ ಹಸಂತಡ್ಕ ನೀಡಿದ್ದಾರೆ. ಪೊಲೀಸರ ತನಿಖೆಯ ಬಳಿಕವಷ್ಟೇ ನಿಜಾಂಶ ತಿಳಿದು ಬರಲಿದೆ.













