Home ದಕ್ಷಿಣ ಕನ್ನಡ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕಡಪ್ಪರ ಸಮೀರ್ ಪೊಲೀಸ್ ವಶಕ್ಕೆ

ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕಡಪ್ಪರ ಸಮೀರ್ ಪೊಲೀಸ್ ವಶಕ್ಕೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು :ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎನ್ನುವವನಾಗಿದ್ದಾನೆ.

ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ, ಫೆಬ್ರವರಿಯಲ್ಲಿ ಸೋಮೇಶ್ವರ ನಿವಾಸಿಯೊಬ್ಬನ ಕೊಲೆ ಯತ್ನ ಪ್ರಕರಣ ಸೇರಿದಂತೆ ಹಲವು ಅಪರಾಧಗಳಲ್ಲಿ ಸಮೀರ್ ಭಾಗಿಯಾಗಿದ್ದ ಎನ್ನಲಾಗಿದೆ.

ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಾಗಿವೆ.