# ಮಂಗಳೂರು : ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಪೊಲೀಸ್ ಅಧಿಕಾರಿಯೋರ್ವರು ದಿಢೀರನೆ ಕುಸಿದು ಬಿದ್ದು ಸಾವು!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/police-officer-death/
- Published: 2022-03-04T22:42:43+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು : ಪೊಲೀಸ್ ಅಧಿಕಾರಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

Sponsored

ಬೆರಳಚ್ಚು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಾಗವ್ವ ( 37) ಮೃತರು.

Advertisement

Advertisement

ಇಂದು ಸಂಜೆ 5ರ ವೇಳೆಗೆ ಪಾಂಡೇಶ್ವರದಲ್ಲಿರುವ ಜಿಲ್ಲಾ ಎಸ್ ಪಿ ಕಚೇರಿಯಲ್ಲಿರುವ ಬೆರಳು ಮುದ್ರೆ ಘಟಕದ
ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಎ ಬಿ ಶೆಟ್ಟಿ ಸರ್ಕಲ್ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.
ಬೆಳಗಾವಿಯ ರಾಮದುರ್ಗಾ ಹೊಸೂರು ನಿವಾಸಿಯಾಗಿದ್ದ ತಿಪ್ಪಣ್ಣ ಅವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement
