Home ದಕ್ಷಿಣ ಕನ್ನಡ ಪ್ರವೀಣ್ ನೆಟ್ಟಾರು ಅವರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ |ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸದಿದ್ದರೆ ಮುಖಕ್ಕೆ...

ಪ್ರವೀಣ್ ನೆಟ್ಟಾರು ಅವರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ |ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸದಿದ್ದರೆ ಮುಖಕ್ಕೆ ಮಸಿ-ಮುತಾಲಿಕ್

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್ ಮೇಸ್ತಾ, ಶರತ್ ಮಡಿವಾಳ ಅವರಿಗೆ ನೀಡಿದ ಘೋಷಣೆ ಈಡೇರಲಿಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ ಮಾತು ತಪ್ಪಿದಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಸಾವಿರಾರು ಜನ ಸೇರಿಸಿ ಧರಣಿ ಕೂತು, ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾದಿತು ಎಂಬ ಎಚ್ಚರಿಕೆಯನ್ನು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.

ಕೃತ್ಯ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅವರಿಗೆ ಎಂದಿಗೂ ಜಾಮೀನು ದೊರೆಯದಂತೆ ನೋಡಿಕೊಳ್ಳಬೇಕು. ಈ ಹಿಂದೆಯೇ ನಾನು ಇಲ್ಲಿಗೆ ಭೇಟಿ ನೀಡುವ ವೇಳೆ ನಿಷೇಧ ಹೇರಿದ್ದನ್ನು ನಾನು ಖಂಡಿಸುತ್ತೇನೆ ಎಂದರು.