

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀ ಯ ಹೆದ್ದಾರಿ ಪುತ್ತೂರು ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ಕುಂಬ್ರ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಎಂಬವರ ಪುತ್ರ ಸಿನಾನ್ ನಿನ್ನೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಸಹಸವಾರ ಹಾಶಿರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.













