Home ದಕ್ಷಿಣ ಕನ್ನಡ ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ...

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅವರು ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಿದರು. ಈಕೆ ವಿಟ್ಲದ ಅರುಣ್ ಮತ್ತು ವಿಜಯಲಕ್ಷ್ಮಿ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.