Home ದಕ್ಷಿಣ ಕನ್ನಡ ಪುತ್ತೂರು : ಮಕ್ಕಳ ಕೈಯಲ್ಲಿದ್ದ ರಕ್ಷೆ ಬಿಚ್ಚಿಸಿದ ವಿಚಾರ -ಮಾತುಕತೆಯ ಮೂಲಕ ಸುಖಾಂತ್ಯ

ಪುತ್ತೂರು : ಮಕ್ಕಳ ಕೈಯಲ್ಲಿದ್ದ ರಕ್ಷೆ ಬಿಚ್ಚಿಸಿದ ವಿಚಾರ -ಮಾತುಕತೆಯ ಮೂಲಕ ಸುಖಾಂತ್ಯ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಬಿಚ್ಚುವಂತೆ ಹೇಳಿದ ಘಟನೆ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರು, ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಮಕ್ಕಳ ಪೋಷಕರು ಶಾಲಾ ಮುಖ್ಯೋಪಾಧ್ಯಾಯರ ಜೊತೆ ಮಾತುಕತೆ ನಡೆಸಿ ಮತ್ತೆ ಮಕ್ಕಳ ಕೈಗೆ ರಕ್ಷಾಬಂಧನವನ್ನು ಕಟ್ಟಿಸಿದ್ದು, ಪ್ರಕರಣವು ಸುಖಾಂತ್ಯ ಕಂಡಿದೆ.

ಪಾಪೆಮಜಲು ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ
ಕೈಯಲ್ಲಿದ್ದ ರಕ್ಷಾಬಂಧನವನ್ನು ಬಿಚ್ಚುವಂತೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ತಿಳಿಸಿದ್ದು, ಈ ಬಗ್ಗೆ ಅರಿತ ಮಕ್ಕಳ ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರಾದ ತೆರೇಜಾ ಎಂ ಸಿಕ್ವೆರಾ ಮತ್ತು ಶಿಕ್ಷಕರ ಜೊತೆ ಮಾತುಕತೆ ನಡೆಸಿದರು.