ಸೋಮವಾರ, 26 ಅಕ್ಟೋಬರ್ 2026
Trending

ಇಂದಿನಿಂದ ನಾಲ್ಕು ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ !! | ಹವಾಮಾನ ಇಲಾಖೆ ಅಧಿಕಾರಿಗಳಿಂದ ಎಚ್ಚರಿಕೆ

ಇಂದಿನಿಂದ ನಾಲ್ಕು ದಿನ ರಾಜ್ಯದ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

Sponsored

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

27, 28ರಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಜಿಲ್ಲೆಗಳಲ್ಲಿ 24 ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದುಬಂದಿದೆ.