Home ದಕ್ಷಿಣ ಕನ್ನಡ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿ ರಾಜು ಹೊಸ್ಮಠ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿ ರಾಜು ಹೊಸ್ಮಠ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜು ಹೊಸ್ಮಠನನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದಕ್ಷಿಣಕನ್ನಡ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪುತ್ತೂರು ಮಹಮ್ಮಾಯಿ ದೇವಳದ ಬಳಿಯಲ್ಲಿರುವ ಸ್ವಯಂಘೋಷಿತ ಸಂಘಟನಾ ಕಚೇರಿಯಲ್ಲಿ 2 ಬಾಲಕಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದು, ಇವರಿಬ್ಬರೂ ಅಕ್ಕ-ತಂಗಿಯಾಗಿದ್ದಾರೆ. ಆರೋಪಿ ವಿರುದ್ಧ ಮಹಿಳಾ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ

ಆದರೆ ಆರೋಪಿಯನ್ನು ಬಂಧಿಸಿಲ್ಲ. ಮುಂದಿನ 10 ದಿನಗಳ ಒಳಗಾಗಿ ಆರೋಪಿ ರಾಜು ಹೊಸ್ಮಠನನ್ನು ಬಂಧಿಸದಿದ್ದರೆ, ಮಹಿಳಾ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.