Home ದಕ್ಷಿಣ ಕನ್ನಡ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್ | ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ....

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್ | ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ. ಮಕ್ಕಳಿಗೆ ಪುಸ್ತಕಗಳ ವಿತರಣೆ

Hindu neighbor gifts plot of land

Hindu neighbour gifts land to Muslim journalist

ಕಡಬ .ನ.18;ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹೇಳಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಕೆಐಓಸಿಲ್ ಸಿಎಸ್ ಆರ್ ನಿಧಿಯ ಮೂಲಕ ಒದಗಿಸಲಾದ ಬರೆಯುವ ಪುಸ್ತಕಗಳ ವಿತರಣೆ ಮಾಡಿ ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾದ ಪತ್ರಿಕಾ ರಂಗದ ಜನರ ಸಮಸ್ಯೆ ನಿವಾರಣೆಗೆ ಗ್ರಾಮದ ಜನರ ಬಳಿ ತೆರಳಿ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಮಾದರಿ.ಇದರಿಂದ ಆರೋಗ್ಯಕರ ಸಮಾಜ ನಿರ್ಮಾಣದೊಂದಿಗೆ ಸಾರ್ವಜನಿಕರಿಗೆ ಪತ್ರಕರ್ತರು ಮಾದರಿಯಾಗಿದ್ದಾರೆ ಎಂದು ಡಾ.ಕುಮಾರ್ ತಿಳಿಸಿದ್ದಾರೆ.
ಸಮಾರಂಭದಲ್ಲಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೊಂಬಾರು,ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿಲಿಕಜೆ-ಗುಂಡ್ಯ,
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗೇರಡ್ಕ,ಸಿರಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ವಿತರಿಸಿದರು.
ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಕೆಐಒಸಿಎಲ್ ಸಂಸ್ಥೆ ಯ ಜನರಲ್ ಮ್ಯಾನೇಜರ್ ರಾಮಕೃಷ್ಣ, ಸೀನಿಯರ್ ಮ್ಯಾನೇಜರ್ ಮುರುಗೇಶ್, ಕಡಬ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ರವಿರಾಜ್ ಎಚ್.ಜಿ,ಕೊಂಬಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ,ಸಿದ್ಧಿಕ್ ನೀರಾಜೆ ಉಪಸ್ಥಿತರಿ ದ್ದರು.ಕಡಬ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಸ್ವಾಗತಿಸಿದರು. ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.ಕಡಬ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯ್ಲ ವಂದಿಸಿದರು.