Home ದಕ್ಷಿಣ ಕನ್ನಡ ದ.ಕ : ಕಾರಿಂಜ ದೇವಸ್ಥಾನ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ- ಸರಕಾರ ಆದೇಶ

ದ.ಕ : ಕಾರಿಂಜ ದೇವಸ್ಥಾನ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ- ಸರಕಾರ ಆದೇಶ

Karinjeshwara temple

Hindu neighbor gifts plot of land

Hindu neighbour gifts land to Muslim journalist

Karinjeshwara temple: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ (Karinjeshwara temple) 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಕಾರ್ಯಗಳಿಗೆ ಕಾಯ್ದಿರಿಸುವ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಈ ಪ್ರದೇಶದಲ್ಲಿ ಎಲ್ಲ ರೀತಿಯ ಗಣಿಗಾರಿಕೆ(Mining) ಮತ್ತು ಕಲ್ಲುಪುಡಿ (ಕ್ರಷರ್‌) ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೇವಸ್ಥಾನದ(Temple) ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಕಾರಿಂಜ ಕ್ಷೇತ್ರದ ದೇವಸ್ಥಾನದ ರಕ್ಷಣೆಯ (Protect)ಸಲುವಾಗಿ ಹಿಂದೂ ಜಾಗರಣ ವೇದಿಕೆಯ(Hindu Jagarana Vedike)ಮನವಿ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಕಾರಿಂಜ ದೇವಸ್ಥಾನದ ಸುರಕ್ಷತೆಯ ದೃಷ್ಟಿಯಿಂದ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿ ಗಣಿಗಾರಿಕೆಯನ್ನು( Mining) ಶಾಶ್ವತವಾಗಿ ಬಂದ್ ಮಾಡುವ ಮೂಲಕ ಪಾವಿತ್ರ್ಯತೆಗೆ ದಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಪ್ರಯತ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ಕುಮಾರ್‌( Sunil Kumar) ಅವರನ್ನು ಕ್ಷೇತ್ರಕ್ಕೆ ಕರೆಸಿ, ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹಾಕಿದ ಪರಿಣಾಮ, ಈ ಪರಿಶೀಲನೆಯ ವರದಿಯ ಅನುಸಾರ, ಜಿಲ್ಲಾಧಿಕಾರಿಯವರು (D.C)ಸರಕಾರಕ್ಕೆ(Government) ಪ್ರಸ್ತಾವನೆ ಸಲ್ಲಿಸಿ , ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಮನವಿ ಮಾಡಿದ್ದರು.

ಈ ದಿಸೆಯಲ್ಲಿ, ಮುಖ್ಯಮಂತ್ರಿಗಳ ನಿರ್ದೇಶನದ ಅನುಸಾರ, ಕಾರಿಂಜ ಕ್ಷೇತ್ರದ ಸುತ್ತಲಿನಲ್ಲಿ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ಸಹಾಯಕ ಕಮಿಷನರ್‌ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಸದ್ಯ, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994ರ ನಿಯಮ 8(3)ರಲ್ಲಿನ ಅಧಿಕಾರವನ್ನು ಚಲಾಯಿಸಿ ತಕ್ಷಣವೇ ಜಾರಿಗೆ ಬರುವ ರೀತಿಯಲ್ಲಿ ಮುಂದಿನ ಆದೇಶದವರೆಗೆ ಗಣಿಗಾರಿಕೆ ನಿಷೇಧಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.