ಶುಕ್ರವಾರ, 30 ಅಕ್ಟೋಬರ್ 2026

ಪುತ್ತೂರು:ಕಾಡಿದ ಅನಾರೋಗ್ಯ!! ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕಾಲೇಜು ವಿದ್ಯಾರ್ಥಿನಿ ಮೃತ್ಯು!!

Advertisement
Advertisement

ಪುತ್ತೂರು:ತೀರಾ ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ.

Sponsored

ಮೃತ ವಿದ್ಯಾರ್ಥಿನಿಯನ್ನು ಪುತ್ತೂರು ಮಾಡಾವು ನಿವಾಸಿ, ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಸಂಹಿತ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ತೀರಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

Advertisement
Advertisement

ಆದರೆ ಇಂದು ಮತ್ತೆ ಅನಾರೋಗ್ಯ ಉಲ್ಬಣಿಸಿದ ಹಿನ್ನೆಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದ್ದು,ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತರುವ ಹೊತ್ತಲ್ಲೇ ದಾರಿ ಮಧ್ಯೆಯೇ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement
Advertisement