Home ದಕ್ಷಿಣ ಕನ್ನಡ Mangaluru : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

Mangaluru : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

Hindu neighbor gifts plot of land

Hindu neighbour gifts land to Muslim journalist

Mangaluru : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಬೆನ್ನಲ್ಲೇ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

 

ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ ಅಜ್ಜು (29), ಮೂಲತಃ ಉಡುಪಿ ಜಿಲ್ಲೆಯ ಬೆಳಪು ಗ್ರಾಮದ ಪ್ರಸಕ್ತ ಬಜ್ಪೆಯಲ್ಲಿ ವಾಸವಾಗಿರುವ ಅಬ್ದುಲ್ ಖಾದರ್ ಯಾನೆ ನೌಫಲ್ (24), ಮೂಲತಃ ಫರಂಗಿಪೇಟೆ ಕುಂಪನಮಜಲಿನ ಪ್ರಸಕ್ತ ಹಾಸನ ಜಿಲ್ಲೆ ಕೆ.ಆರ್.ಪುರಂ ನಿವಾಸಿ ನೌಷಾದ್ ಯಾನೆ ವಾಮಂಜೂರು ನೌಷಾದ್ (39) ಬಂಧಿತ ಆರೋಪಿಗಳಾಗಿದ್ದಾರೆ.

 

ಅಂದಹಾಗೆ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

 

ಇನ್ನು ಆರೋಪಿ ನೌಷದ್ ವಿರುದ್ಧ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.

 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪೈಕಿ ಅಝರುದ್ದೀನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತರ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ