Home ದಕ್ಷಿಣ ಕನ್ನಡ ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನ ಮೇಲೆ ಹಲ್ಲೆ, ಹತ್ತು ಮಂದಿಯ ಮೇಲೆ ಎಫ್ಐಆರ್...

ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನ ಮೇಲೆ ಹಲ್ಲೆ, ಹತ್ತು ಮಂದಿಯ ಮೇಲೆ ಎಫ್ಐಆರ್ ದಾಖಲು

Hindu neighbor gifts plot of land

Hindu neighbour gifts land to Muslim journalist

ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ಈ ಬಗ್ಗೆ ದೂರು ನೀಡಿದ್ದು, ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐ ಆರ್ ಕೂಡ ದಾಖಲಾಗಿದೆ.

ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮಾತ್ರವಲ್ಲದೆ ಹಲ್ಲೆ ನಡೆಸಿದ ವಿಡಿಯೋ ಕೂಡ ಗ್ರೂಪ್‌ಗಳಲ್ಲಿ ಹರಿಯಬಿಡಲಾಗಿದೆ. ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ. ವಿಡಿಯೋ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೇ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.