ಶನಿವಾರ, 24 ಅಕ್ಟೋಬರ್ 2026

ಬೆಳ್ಳಾರೆ : ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗುತ್ತಿರುವ ಆಡುಗಳು : ವಾಹನ ಸವಾರರಿಗೆ ತೊಂದರೆ

ಸುಳ್ಯ : ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ಅಪಘಾತ ಸಂಭವಿಸಿ ಸಾಕಷ್ಟು ಜೀವ ಹಾನಿಯಾಗುವ ಬಗ್ಗೆ ನಾವೆಲ್ಲ ಕೇಳಿದ್ದೇವೆ.

ಇದೀಗ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಅಂತಹದೇ ಸಂದಿಗ್ದ ಪರಿಸ್ಥಿತಿ ಬಂದಿದೆ.ಬೆಳ್ಳಾರೆ ಪೇಟೆಯಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಆಡುಗಳ ಹಿಂಡು ದ್ವಿಚಕ್ರ ವಾಹನ ಸವಾರರ ಪ್ರಾಣ ಹಿಂಡುತ್ತಿದೆ.

ದಿಢೀರನೇ ರಸ್ತೆಗೆ ಬರುವ ಆಡುಗಳ ಹಿಂಡಿನಿಂದಾಗಿ ವಾಹನ ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ.ಬೀದಿಗೆ ಸಾಕು ಪ್ರಾಣಿಗಳನ್ನು ಬಿಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ